LATEST NEWS
ಅಮಾಸೆಬೈಲ್ – ಸ್ನಾನಕ್ಕೆಂದು ಹೊಳೆಗೆ ಇಳಿದ ಇಬ್ಬರು ಪಿಯುಸಿ ವಿಧ್ಯಾರ್ಥಿಗಳ ಸಾವು
ಕುಂದಾಪುರ ಮಾರ್ಚ್ 31: ಸ್ನಾನಕ್ಕೆಂದು ಹೊಳೆಗೆ ಇಳಿದ ಇಬ್ಬರು ಪ್ರಥಮ ಪಿಯುಸಿ ವಿಧ್ಯಾರ್ಥಿಗಳು ಸಾವನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಕಳೀನಜೆಡ್ಡು ಹೊಳೆಯಲ್ಲಿ ನಡೆದಿದೆ.
ಮೃತರನ್ನು ಉಳ್ಳೂರು-74 ಎಂಬಲ್ಲಿನ ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18) ಎಂದು ಗುರುತಿಸಲಾಗಿದೆ.
ಶಂಕರನಾರಾಯಣ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದ ಸುಮಂತ್ ಹಾಗೂ ಗಣೇಶ್ ಸ್ನೇಹಿತರಾಗಿದ್ದು ಗುರುವಾರ ಮಧ್ಯಾಹ್ನದ ವೇಳೆಗೆ ಹೊಳೆ ಬಳಿ ತೆರಳಿದ್ದು ಸ್ನಾನಕ್ಕೆಂದು ನೀರಿಗಿಳಿದಿದ್ದಾರೆ. ಈ ವೇಳೆ ಸೆಳೆತಕ್ಕೆ ಸಿಕ್ಕು ಕೊಚ್ಚಿ ಹೋಗಿದ್ದಾರೆನ್ನಲಾಗಿದೆ. ಇದನ್ನು ಕಂಡ ವ್ಯಕ್ತಿಯೊಬ್ಬರ ಮಾಹಿತಿಯಂತೆ ಸ್ಥಳೀಯರು ರಕ್ಷಿಸಲು ಮುಂದಾದರೂ ಕೂಡ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಅಮಾಸೆಬೈಲು ಪಿಎಸ್ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ
You must be logged in to post a comment Login