ವಿಟ್ಲದ ಕೋಟಿಕೆರೆ ಎಂಬಲ್ಲಿ ನೀರಿನಲ್ಲಿ ಮುಳುಗಿ ವಿಧ್ಯಾರ್ಥಿ ಸಾವು

ಮಂಗಳೂರು ನ.14: ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ ಅಶ್ವದ್ ಅಹ್ಮದ್ ಎಂದು ಗುರುತಿಸಲಾಗಿದೆ.

ಈತ ವಿಟ್ಲದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಕಲಿಯುತ್ತಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ವಿದ್ಯಾರ್ಥಿಯನ್ನು ವ್ಯಕ್ತಿಯೊಬ್ಬರು ರಕ್ಷಿಸಿದ್ದರು. ಕೂಡಲೇ ವಿಟ್ಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ವಿಧ್ಯಾರ್ಥಿ ಸಾವನಪ್ಪಿದ್ದಾನೆ.

Facebook Comments

comments