LATEST NEWS
ಓದು ಎಂದಿದ್ದಕ್ಕೆ 7 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು
ಬ್ರಹ್ಮಾವರ ಅಕ್ಟೋಬರ್ 1: ಓದು ಎಂದು ಬುದ್ದಿ ಹೇಳಿದ್ದಕ್ಕೆ ಬೇಸರಗೊಂಡು 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಮೃತ ವಿಧ್ಯಾರ್ಥಿಯನ್ನು ಕಾಜ್ರಳ್ಳಿ ಜನತಾ ಕಾಲೊನಿ ನಿವಾಸಿಗಳಾದ ಕವಿತಾ ಹಾಗೂ ಉಮೇಶ ಅವರ ಪುತ್ರ 7 ನೇ ತರಗತಿ ವಿದ್ಯಾರ್ಥಿ ತನುಷ್(12) ಎಂದು ಗುರುತಿಸಲಾಗಿದೆ.
ತನುಷ್ ಕಲಿಯುವಿಕೆಯಲ್ಲಿ ಹಿಂದಿದ್ದು, ಪೋಷಕರು ಹೇಳಿದ ಮಾತನ್ನು ಕೇಳದೇ ಹಠಮಾರಿತನದಿಂದ ವರ್ತಿಸುತ್ತಿದ್ದ ಎನ್ನಲಾಗಿದೆ. ನಿವ್ವೆ ಬೆಳಿಗ್ಗೆ ಸುಮಾರು 9 ಗಂಟೆಗೆ ಕವಿತಾ ಅವರು ಎಂದಿನಂತೆ ತಮ್ಮ ಕೆಲಸಕ್ಕೆ ಹೊರಟಿದ್ದರು. ಆನ್ಲೈನ್ ಕ್ಲಾಸ್ಗೆ ಹಾಜರಾಗಬೇಕಿದ್ದರಿಂದ ಮಗನನ್ನು ಮನೆಯಲ್ಲಿಯೇ ಬಿಟ್ಟು ಹೋಗಿದ್ದರು. ಹೊರಡುವ ಮುನ್ನ ಒಳ್ಳೆಯ ರೀತಿಯಲ್ಲಿ ಓದು ಎಂದು ಬುದ್ದಿ ಮಾತನ್ನು ಹೇಳಿದ್ದರು.
ತನುಷ್ ಹಠಮಾರಿತನದಿಂದ ಹಾಗೂ ವಿದ್ಯೆ ಸರಿಯಾಗಿ ತಲೆಗೆ ಹೋಗದ ಕಾರಣ ಬೇಸರಗೊಂಡು ಹಳೆಯ ಮನೆಯ ಕೊಠಡಿಯಲ್ಲಿದ್ದ ಜೋಕಾಲಿ ಸೀರೆಯನ್ನು ಪಕ್ಕಾಸಿಗೆ ಕಟ್ಟಿದ್ದು, ಅದೇ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಿಗ್ಗೆ ಸುಮಾರು 10 ಗಂಟೆಯಿಂದ 1 ಗಂಟೆಯ ನಡುವೆ ತನುಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Facebook Comments
You may like
-
ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕ್; ನವವಿವಾಹಿತ ಸಾವು
-
ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರಿನಲ್ಲಿ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ : ಸದಾಶಿವ ಪ್ರಭು
-
ಉಡುಪಿ ಗಣರಾಜ್ಯೋತ್ಸವ ಸಂಭ್ರಮಕ್ಕೆ ಮೂರು ವರ್ಷದ ಬಾಲೆಯಿಂದ ಮಿಷನ್ ಗನ್ ಭದ್ರತೆ
-
ಉತ್ತಮ ಆಡಳಿತ ಕೊಡುವ ಮನೋಭಾವನೆ ಇದ್ದರೆ ಖಾತೆ ಕ್ಯಾತೆ ಬರುವುದಿಲ್ಲ – ಸಚಿವ ಅಂಗಾರ
-
ಸೆಕ್ಯುರಿಟಿಗಾರ್ಡ್ 6ನೇ ಮಹಡಿಯಿಂದ ಬಿದ್ದು ಮೃತ್ಯು
-
ಬಂಗಾರ್ ಪಲ್ಕೆಯ ಜಲಪಾತದ ಗುಡ್ಡ ಕುಸಿದು ಓರ್ವ ಮೃತ್ಯು
You must be logged in to post a comment Login