BELTHANGADI
ಧರ್ಮಸ್ಥಳ- ಆಟ ಆಡುತ್ತಿರುವಾಗಲೇ ಹೃದಯಾಘಾತದಿಂದ 16 ರ ಪ್ರಾಯದ ಬಾಲಕ ಸಾವು

ಬೆಳ್ತಂಗಡಿ ಮೇ 04: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್ (16) ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಉಜಿರೆ ಖಾಸಗಿ ಆಸ್ಪತ್ರೆಯಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹವನ್ನು ಶವಪರೀಕ್ಷೆಗೆಂದು ಸಾಗಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
