LATEST NEWS
ಪರೀಕ್ಷೆಯಲ್ಲಿ ಕಡಿಮೆ ಮಾರ್ಕ್ ನೀಡಿದ್ದಕ್ಕೆ ಟೀಚರ್ ವಾಟರ್ ಬಾಟಲ್ ಗೆ ಎಕ್ಸ್‌ಪೈರಿಯಾದ ಮಾತ್ರೆ ಹಾಕಿದ ವಿಧ್ಯಾರ್ಥಿನಿಯರು….!!
ಮಂಗಳೂರು ಅಕ್ಟೋಬರ್ 07: ಶಾಲಾ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಹಾಗೂ ಒಂದು ಮಾಕ್ ಕಡಿಮೆ ನೀಡಿದರು ಎಂಬ ಕಾರಣಕ್ಕೆ ಆರನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಗಣಿತ ಶಿಕ್ಷಕಿಯ ವಾಟರ್‌ಬಾಟಲ್‌ಗೆ ಎಕ್ಸ್‌ಪೈರಿಯಾದ ಮಾತ್ರೆ ಹಾಕಿದ ಘಟನೆ ಳ್ಳಾಲದ ಶಾಲೆಯೊಂದರಲ್ಲಿ ನಡೆದಿದೆ. ಇದರ ಪರಿಣಾಮ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡಿದ್ದಾರೆ.
ಘಟನೆ ಸಂಬಂಧ ಶುಕ್ರವಾರಶಾಲೆಯಲ್ಲಿ ಎಸ್‌ಡಿಎಂಸಿ ತುರ್ತು ಸಭೆ ನಡೆಸಿ ವಿದ್ಯಾರ್ಥಿನಿಯರಿಬ್ಬರಿಗೆ ವರ್ಗಾವಣೆ ಪತ್ರ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಧರಿಸಿದೆ. ಶಾಲಾ ಯುನಿಟ್ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಆರನೇತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿತ್ತು. ಅಲ್ಲದೆ ಸರಿಯಿದ್ದ ಉತ್ತರಕ್ಕೆ ಶಿಕ್ಷಕಿ ತಪ್ಪು ಹಾಕಿದ್ದಾರೆ ಎನ್ನುವ ದ್ವೇಷವೂ ವಿದ್ಯಾರ್ಥಿನಿಯಲ್ಲಿ ಹುಟ್ಟಿತ್ತು.
ಇದರ ಸೇಡು ತೀರಿಸಲು ತನ್ನ ಸ್ನೇಹಿತೆಯೊಬ್ಬಳ ಸಹಾಯ ಪಡೆದುಕೊಂಡ ವಿದ್ಯಾರ್ಥಿನಿ, ಸ್ಟಾಫ್ ರೂಮ್‌ನಲ್ಲಿ ಶಿಕ್ಷಕಿಯರಿಲ್ಲದ ಸಂದರ್ಭ ನೋಡಿಕೊಂಡು ಎಕ್ಸ್‌ಪೈರಿ ಆದಂತಹ ಮಾತ್ರೆಗಳನ್ನು ಶಿಕ್ಷಕಿಗೆ ಸೇರಿದ ವಾಟರ್‌ಬಾಟಲಿಗೆ ಹಾಕಿದ್ದಾರೆ. ಇದೇ ಬಾಟಲಿಯ ನೀರನ್ನು ಗಣಿತ ಶಿಕ್ಷಕಿ ಸೇರಿದಂತೆ ಇನ್ನೋರ್ವ ಶಿಕಕಿಯೂ ಕುಡಿದಿದ್ದಾರೆ. ಸಲ ಹೊತ್ತಿನಲ್ಲಿ ಶಿಕ್ಷಕಿಯೊಬ್ಬರಿಗೆ ಅಸ್ವಸ್ಥತೆ ಕಂಡುಬಂದಿದೆ. ಇನ್ನೋರ್ವ ಶಿಕ್ಷಕಿಗೆ ಮುಖದಲ್ಲಿ ಊತ ಉಂಟಾಗಿದೆ. ನೀರಿನ ರುಚಿಯಲ್ಲಿ ಬದಲಾವಣೆ ಕಂಡುಬಂದು ಸೂಕ್ಷ್ಮವಾಗಿ ಗಮನಿಸಿದಾಗ ನೀರಲ್ಲಿ ಮಾತ್ರೆಗಳಿರುವುದು ಕಂಡುಬಂದಿದೆ. ಈ ಕುರಿತು ವಿಚಾರಿಸಿ ಸಿಸಿಟಿವಿ ಗಮನಿಸಿದಾಗ ವಿದ್ಯಾರ್ಥಿನಿಯರ ಕೃತ್ಯ ಬೆಳಕಿಗೆ ಬಂದಿದೆ. ಸಣ್ಣ ವಯಸ್ಸಿನಲ್ಲಿ ಇಷ್ಟೊಂದು ಕಾರುಬಾರು ಮಾಡುವ ವಿದ್ಯಾರ್ಥಿನಿಯರ ನಡೆಗೆ ಇಡೀ ಶಾಲಾ ಆಡಳಿತ ಮಂಡಳಿ, ಹೆತ್ತವರು ಕಂಗೆಟ್ಟಿದ್ದಾರೆ.