LATEST NEWS
ಪ್ಯಾರಾಮೆಡಿಕಲ್ ವಿಧ್ಯಾರ್ಥಿನಿ ನೇಣಿಗೆ ಶರಣು…!!

ಬೆಳ್ತಂಗಡಿ ಜೂನ್ 22: ಪ್ಯಾರಾ ಮೆಡಿಕಲ್ ಒದುತ್ತಿರುವ ವಿಧ್ಯಾರ್ಥಿನಿಯೊಬ್ಬಳು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಳ್ತಂಗಡಿಯ ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಆತ್ಮಹತ್ಯೆ ಗೈದ ದುರ್ದೈವಿಯಾಗಿದ್ದಾಳೆ.
ಆದೀರಾ, ಸಹೋದರರ ಜೊತೆ ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯಲ್ಲಿದ್ದರು. ಅಲ್ಲಿಂದಲೇ ತೆರಳಿ ಆದೀರಾ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಆದರೆ ಕಳೆದ ಭಾನುವಾರ ರಾತ್ರಿ ಮೂವರು ಒಟ್ಟಿಗೆ ಊಟ ಮಾಡಿ ಒಂದು ಕೋಣೆಯಲ್ಲಿ ಆದೀರಾ ಮಲಗಿದ್ದು ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ.

ಆದರೆ ಜೂನ್ 19 ಸೋಮವಾರ ಬೆಳಗ್ಗೆ 8 ಗಂಟೆಗೆ ಎದ್ದು ನರೇಂದ್ರ ನೋಡುವಾಗ ಆದೀರಾ ತನ್ನ ಚೂಡಿದಾರ್ ಶಾಲಿನಲ್ಲಿ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದು ತಕ್ಷಣ ತಂದೆ ದಾಸ್ ಅವರಿಗೆ ಈ ಬಗ್ಗೆ ತಿಳಿಸಿದ್ದಾರೆ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ತನಿಖೆ ಆರಂಭಿಸಿದ್ದಾರೆ.