LATEST NEWS
ಸಂಗಂ ಬ್ರಿಡ್ಜ್ ನಿಂದ ನದಿಗೆ ಹಾರಿದ ಯುವಕ….!!

ಕುಂದಾಪುರ ಸೆಪ್ಟೆಂಬರ್ 08: ಕುಂದಾಪುರದ ಸಂಗಂ ಬ್ರಿಡ್ಜ್ ನಿಂದ ಯುವಕನೊಬ್ಬ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ ಸಾಯೀಶ್ ಶೆಟ್ಟಿ ಯಾನೆ ನಿಕ್ಕಿ ಎಂದು ಗುರುತಿಸಲಾಗಿದೆ.

ಗುರುವಾರ ಮಧ್ಯಾಹ್ನ ಸೈಕಲ್‌ನಲ್ಲಿ ಹೇರಿಕುದ್ರು ಸೇತುವೆ ಬಳಿ ಬಂದ ಸಾಯೀಶ್ ಶೆಟ್ಟಿ ಸೈಕಲ್ ಹಾಗೂ ಮೊಬೈಲ್ ಅನ್ನು ಪಕ್ಕದಲ್ಲಿಟ್ಟು ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ್ದ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿರುವ ಪೊಲೀಸರ, ಮುಳುಗು ತಜ್ಞರು ಶೋಧ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಮಳೆಯೂ ಬೀಳುತ್ತಿರುವ ಕಾರಣ ಶೋಧ ಕಾರ್ಯಕ್ಕೆ ತೊಡಕಾಗಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್, ಎಸ್‌ಐ ಸದಾಶಿವ ಗವರೋಜಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶಿವಮೊಗ್ಗದ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದ ಸಾಯೀಶ್ ಶೆಟ್ಟಿ ಈಚೆಗೆ ನೀಟ್ ಪರೀಕ್ಷೆ ಬರೆದು ಉತ್ತಮ ಅಂಕಗಳ ನಿರೀಕ್ಷೆಯಲ್ಲಿದ್ದರು. ಫಲಿತಾಂಶ ಪ್ರಕಟವಾದ ಬಳಿಕ ನಿರೀಕ್ಷೆಯಷ್ಟು ಅಂಕ ಬಂದಿಲ್ಲ ಎಂದು ಬೇಸರಗೊಂಡು ನದಿಗೆ ಹಾರಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.