BANTWAL
ದ್ವೀತಿಯ ಪಿಯುಸಿ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಕಷ್ಟ ಇತ್ತು ಎಂದು ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ
ದ್ವೀತಿಯ ಪಿಯುಸಿ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಕಷ್ಟ ಇತ್ತು ಎಂದು ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ
ಬಂಟ್ವಾಳ, ಮಾ.7: ದ್ವೀತಿಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲೇ ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೌತಶಾಸ್ತ್ರದ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರುತ್ತದೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಹುತೇಕ ಪರೀಕ್ಷೆಗಳ ಫಲಿತಾಂಶದ ನಂತರ ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದರೆ ವಗ್ಗ ಕಾರಿಂಜಕೋಡಿ ನಿವಾಸಿ ಅರವಿಂದ ರಾವ್ ಎಂಬವರ ಪುತ್ರ ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನ ವಿಜ್ಞಾನ ವಿಭಾಗದ ನಂದನ್ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಕಷ್ಟ ಇತ್ತು ಎಂದು ಪತ್ರ ಬರೆದಿಟ್ಟು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಎಸೆಸೆಲ್ಸಿಯಲ್ಲಿ 94 ಶೇಕಡಾ ಅಂಕ ಪಡೆದಿದ್ದ ನಂದನ್ ಪಿಯುಸಿಯಲ್ಲೂ ಅಷ್ಟೇ ಪ್ರತಿಭಾವಂತನಾಗಿದ್ದ. ಪ್ರಸಕ್ತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಕಷ್ಟವಿದ್ದು ನಾನು ನಿರೀಕ್ಷೆ ಮಾಡಿದ ಅಂಕಗಳು ಸಿಗುವುದು ಕಷ್ಟ ಎಂದು ಪತ್ರ ಬರೆದಿಟ್ಟು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾತ್ರಿ ಸುಮಾರು 12 ಗಂಟೆಯವರೆಗೂ ಈತ ಓದುತ್ತಿದ್ದು 12:30ರ ವೇಳೆಗೆ ತಾಯಿ ಎಚ್ಚರಗೊಂಡು ನೋಡಿದಾಗ ಈತ ಮನೆಯಲ್ಲಿರಲಿಲ್ಲ. ಕೂಡಲೇ ಹುಡುಕಾಟ ನಡೆಸಿದಾಗ ಆತನ ಮೊಬೈಲ್ ಫೋನ್ ತೋಟದಲ್ಲಿ ಪತ್ತೆಯಾಗಿದ್ದು, ಅಲ್ಲೇ ಪಕ್ಕದ ಬಾವಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಸೆ ಪ್ರಸನ್ನ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.