BELTHANGADI
ಬೆಳ್ತಂಗಡಿ – 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಬೆಳ್ತಂಗಡಿ ಫೆಬ್ರವರಿ 19: 7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ನಡೆದಿದೆ.
ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ.ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಮನೆಯ ಕೋಣೆಯಲ್ಲಿ ಫೆಬ್ರವರಿ 18ರಂದು ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
