Connect with us

BELTHANGADI

ಮನೆ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ..!

ಬೆಳ್ತಂಗಡಿ: ಕಾಲೇಜು ವಿಧ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರಿನಲ್ಲಿ ನಡೆದಿದೆ.


ಕತ್ತೋಡಿಬೈಲು ನಿವಾಸಿ 19 ವರ್ಷದ ಸೌಮ್ಯಾ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿದ್ದು, ಕೋವಿಡ್ ಲಾಕ್ ಡೌನ್ ತೆರವಾದ ನಂತರವೂ ತರಗತಿಗೆ ಹಾಜರಾಗದೇ ಖಿನ್ನತೆಗೊಳಗಾಗಿದ್ದಳು ಎನ್ನಲಾಗಿದೆ.

ಬೆಳಗ್ಗೆ ಎಂದಿನಂತೆ ಮನೆಯಲ್ಲಿ ಉಪಹಾರ ಮುಗಿಸಿದ ನಂತರ ಕಾಣೆಯಾಗಿದ್ದರು. ಮನೆಯವರು ಹುಡುಕಾಡಿದಾಗ ಆಕೆ ಮನೆಯ ಛಾವಣಿಯಲ್ಲಿ ಚೂಡಿದಾರದ ಶಾಲನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿರುವುದು ಕಂಡುಬಂದಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.