LATEST NEWS
ಸಾಸ್ತಾನ – ಮೊಬೈಲ್ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ

ಕೋಟ ಮಾರ್ಚ್ 07: ಮನೆಯಲ್ಲಿ ಮೊಬೈಲ್ ಕೊಡಲಿಲ್ಲ ಎಂದು ಪಿಯ ವಿಧ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ಸಂಭವಿಸಿದೆ.
ಮೃತ ವಿದ್ಯಾರ್ಥಿನಿ ಕುಂಬಾರಬೆಟ್ಟು ನಿವಾಸಿ ಪುತ್ರಿ ದಿಶಾ(16) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ದಿಶಾ ಕೋಟದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಪರೀಕ್ಷೆ ಮುಗಿಸಿ ರಜೆಯಲ್ಲಿ ಮನೆಯಲ್ಲಿ ಇದ್ದು, ಗುರುವಾರ ಮಧ್ಯಾಹ್ನ ಸಮಯ ಮೊಬೈಲ್ ಕೊಡಬೇಕೆಂದು ಹಠ ಹಿಡಿದಾಗ ಮನೆಯವರು ಮತ್ತೆ ಮೊಬೈಲ್ ಪೋನ್ ನೀಡುತ್ತೇನೆ ಎಂದು ಹೇಳಿದ್ದು, ಇದರಿಂದ ಕೋಪಗೊಂಡ ದಿಶಾ ನೇರವಾಗಿ ಕೋಣೆಯ ಬಾಗಿಲು ಹಾಕಿಕೊಂಡಿದ್ದು, ತಾಯಿ ಜೋರು ಮಾಡಿ ಬಾಗಿಲು ತೆರೆಯಲು ಹೇಳಿದ್ದಾರೆ. ಎಷ್ಟು ಹೊತ್ತಾದರೂ ಬಾಗಿಲು ತೆರೆಯದೆ ಇರುವುದನ್ನು ಕಂಡ ತಾಯಿ, ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.

ಮನೆಯ ಕಿಟಕಿಯ ಕಂಬಿಗೆ ಹಗ್ಗ ಹಾಕಿಕೊಂಡು ಆತ್ಮಹತ್ಯೆಯತ್ನಿಸಿದ್ದು, ತಕ್ಷಣ ಸ್ಥಳೀಯರು ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
3 Comments