LATEST NEWS
ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವಪತ್ತೆ ಕೊಲೆ ಶಂಕೆ ವ್ಯಕ್ತಪಡಿಸಿದ ಸ್ಥಳೀಯರು…!!
ಉಳ್ಳಾಲ ಮಾರ್ಚ್ 10: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದ್ದು, ಸ್ಥಳೀಯರು ಇದೊಂದು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತ ಯುವತಿಯನ್ನು ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(20) ಎಂದು ಗುರುತಿಸಲಾಗಿದ್ದು, ಈಕೆ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದ ಈಕೆ ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದಳು.
ಯುವತಿಯ ತಾಯಿ ಅಂಗನವಾಡಿಯೊಂದಕ್ಕೆ ಕೆಲಸಕ್ಕೆ ತೆರಳಿದ್ದು ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದ ಸಂದರ್ಭ ಮನೆಯೊಳಗಿನ ಕೋಣೆಯೊಳಗೆ ಪ್ರೇಕ್ಷಾ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇನ್ನು ಸ್ಥಳೀಯರ ಪ್ರಕಾರ ಇದು ಕೊಲೆಯಾಗಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ, ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.