LATEST NEWS
ಮಣಿಪಾಲ -ಪರೀಕ್ಷೆಯ ಕೊಠಡಿಯಿಂದ ಹೊರಹಾಕಿದ್ದಕ್ಕೆ..ಕಾಲೇಜಿನ 6 ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿ

ಉಡುಪಿ, ಫೆಬ್ರವರಿ 17:ಪರೀಕ್ಷೆ ಬರೆಯುತ್ತಿರುವ ವೇಳೆ ಮೊಬೈಲ್ ಬಳಕೆ ಮಾಡಿದ್ದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿಧ್ಯಾರ್ಥಿ ಮನನೊಂದು ಆರನೆ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಮಾಹೆ ವಿವಿಯಲ್ಲಿ ನಡೆದಿದೆ. ಬಿಹಾರ ಮೂಲದ ಸತ್ಯಂ ಸುಮನ್(19) ಮೃತ ವಿದ್ಯಾರ್ಥಿ ಎಂದು ಎಂದು ಗುರುತಿಸಲಾಗಿದೆ.
ಇವರು ಮಾಹೆಯ ಎಂಸಿಎಚ್ ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿಯಾಗಿದ್ದರು. ಮಧ್ಯಾಹ್ನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್ ಮೊಬೈಲ್ ಫೋನ್ ಬಳಸುತ್ತಿರುವುದನ್ನು ಪರೀಕ್ಷಾ ಮೇಲ್ವಿಚಾರಕರು ಗಮನಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸುಮನ್ ರನ್ನು ಪರೀಕ್ಷಾ ಮೇಲ್ವಿಚಾರಕರು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ 6ನೇ ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.