DAKSHINA KANNADA
ಪುತ್ತೂರು – ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವಿಧ್ಯಾರ್ಥಿನಿ ಪ್ರತೀಕ್ಷಾ ಸಾವು

ಪುತ್ತೂರು ಫೆಬ್ರವರಿ 13: ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಫೆಬ್ರವರಿ 12 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ನಡೆದಿದೆ.
ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಮೃತ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ಮೂರು ದಿನಗಳ ಹಿಂದೆ ಬೆದ್ರಾಳ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಆಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
