Connect with us

    LATEST NEWS

    ಉಳ್ಳಾಲ – ನೇಪಾಳ ಮೂಲದ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

    ಉಳ್ಳಾಲ ಜೂನ್ 09 : ಬಾಲಕಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ.


    ನೇಪಾಳ ಮೂಲದ ಅಪ್ರಾಪ್ತ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ತೊಕ್ಕೊಟ್ಟುನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ಚೆಂಬುಗುಡ್ಡೆಯಲ್ಲಿ ಬಾಡಿಗೆಗೆ ನೆಲೆಸಿದ್ದರು. ರಾಮ್ ಶರಣ್ ಅವರ ಎರಡನೇ ಮಗಳು  ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆಯನ್ನು ಮಂಗಳೂರಲ್ಲೇ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು.

    ಆದರೆ ಬಾಲಕಿ ತಾನು ನೇಪಾಳದಲ್ಲೇ ಓದು ಮುಂದುವರಿಸೋದಾಗಿ ಹಠ ಹಿಡಿದಿದ್ದಳು. ಇಂದು ಮದ್ಯಾಹ್ನ ವೇಳೆ ಬಾಲಕಿಯ ತಾಯಿ‌ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರಕೊಂಡು ಹೋಗಿದ್ದ ವೇಳೆ ಬಾಲಕಿ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply