Connect with us

    LATEST NEWS

    ಮತಗಟ್ಟೆಗಳಲ್ಲಿ ವಿದ್ಯಾರ್ಥಿ ಸ್ವಯಂ ಸೇವಕರ ನೇಮಕ- ಜಿಲ್ಲಾಧಿಕಾರಿ

    ಮತಗಟ್ಟೆಗಳಲ್ಲಿ ವಿದ್ಯಾರ್ಥಿ ಸ್ವಯಂ ಸೇವಕರ ನೇಮಕ- ಜಿಲ್ಲಾಧಿಕಾರಿ

    ಉಡುಪಿ ಫೆಬ್ರವರಿ 10: ಜಿಲ್ಲೆಯಲ್ಲಿ ನಡೆಯುವ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ ಅನುಕೂಲಕ್ಕಾಗಿ ಕಾಲೇಜು ವಿದ್ಯಾರ್ಥಿಗಳನ್ನು ಸ್ವಯಂ ಸೇವಕರನ್ನಾಗಿ ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

    ಅವರು ಶನಿವಾರ ಅಜ್ಜರಕಾಡು ಕ್ರೀಡಾಂಗಣದಲ್ಲಿ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

    ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಡುವ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮತಗಟ್ಟೆಗಳಿಗೆ ಆಗಮಿಸುವ ವಿಕಲಚೇತನರಿಗೆ ವೀಲ್ ಛೇರ್ ಮೂಲಕ ಮತಗಟ್ಟೆ ತಲುಪಿಸುವುದು, ಗರ್ಭಿಣಿಯರು, ವೃದ್ದರಿಗೆ ಮತದಾನ ಮಾಡಲು ಸಹಕರಿಸುವುದರ ಜೊತೆಗೆ ಮತದಾನಕ್ಕೆ ಆಗಮಿಸುವವರಿಗೆ ಕುಡಿಯುವ ನೀರು ಸರಬರಾಜು ಮಾಡುವುದು ಮುಂತಾದ ಸೇವೆ ನೀಡಲು , ಕಾಲೇಜು ವಿದ್ಯಾರ್ಥಿಗಳ ಸ್ವಯಂ ಸೇವಕರ ತಂಡವನ್ನು ನಿಯೋಜಿಸಿ, ಅವರಿಗೆ ಅಗತ್ಯವಿರುವ ಸೂಕ್ತ ತರಬೇತಿ ನೀಡಿ, ಅವರು ಮತದಾನ ಮಾಡುವ ಮತಗಟ್ಟೆಯಲ್ಲಿಯೇ ಕಾರ್ಯ ನಿರ್ವಹಿಸಲು ನಿಯೋಜಿಸಲಾಗುವುದು, ಪ್ರಜಾಪ್ರಭುತ್ವದ ಯಶಸ್ವಿಗೆ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಿ , ತಮ್ಮ ಅಮೂಲ್ಯ ಕೊಡುಗೆ ನೀಡಲು ಇದು ಒಂದು ಸದವಕಾಶ ಎಂದು ಜಿಲ್ಲಾಧಿಕಾರಿ ಹೇಳಿದರು.

    ಈ ಬಾರಿಯ ಮತದಾನ ಯಂತ್ರದಲ್ಲಿ ವಿವಿ ಪ್ಯಾಟ್ ಉಪಕರಣ ಅಳವಡಿಸಲಾಗಿದ್ದು, ಇದರಿಂದ ನಾವು ಯಾರಿಗೆ ಮತ ಚಲಾಯಿಸಿದ್ದೇವೆ ಎಂಬ ಮಾಹಿತಿಯನ್ನು ಅಲ್ಲಿಯೇ ಖಾತರಿಪಡಿಸಿಕೊಳ್ಳಲು ಸಾಧ್ಯವಿದ್ದು, ವಿದ್ಯಾರ್ಥಿಗಳು ಈ ಕುರಿತು ತಮ್ಮ ವ್ಯಾಪ್ತಿಯ ಮತದಾರರಿಗೆ ಅರಿವು ಮೂಢಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಬಿ.ಎಲ್.ಓ ಗಳನ್ನು ಸಂಪರ್ಕಿಸಿ ಅವರೊಂದಿಗೆ ಅವೇರ್‍ನೆಸ್ ಗ್ರೂಪ್ ಮಾಡಿಕೊಳ್ಳುವಂತೆ ಹಾಗೂ ಈ ಕುರಿತು ಎಲ್ಲಾ ಬಿ.ಎಲ್.ಓ ಗಳ ಈಗಾಗಲೇ ಮಾಹಿತಿ ನೀಡಿದ್ದು, ಬಿ.ಎಲ್.ಓ ಗಳ ವಿವರಗಳು ಚುನಾವಣಾ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಈ ಗ್ರೂಫ್ ನ ಸದಸ್ಯರಿಗೆ ಮತದಾನ ದಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಮಾಹಿತಿಯ ವಿವರ ಒದಗಿಸುವುದಾಗಿ ತಿಳಿಸಿದರು.

    ಎಲ್ಲಾ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಂಡು, ತಪ್ಪದೇ ಮತ ಚಲಾಯಿಸಿ, ಮತದಾನ ಮಾಡದಿದ್ದರೆ ತಾವು ಪ್ರಶ್ನಿಸುವ , ಸಮಸ್ಯೆ ಹೇಳಿಕೊಳ್ಳುವ ಅವಕಾಶದಿಂದ ವಂಚಿತರಾಗುತ್ತೀರಿ, ಆದ್ದರಿಂದ ಮತ ಚಲಾಯಿಸಿ , ಸರ್ಕಾರ ಮತ್ತು ಜನಪ್ರತಿನಿಧಿಗಳನ್ನು, ತಮ್ಮ ಸಮಸ್ಯೆಗಳ ಕುರಿತು ಪ್ರಶ್ನೆ ಮಾಡಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಪಾರದರ್ಶಕ, ಮುಕ್ತ, ನ್ಯಾಯ ಸಮ್ಮತ ಚುನಾವಣೆಗೆ ಯಾವುದೇ ಅಡಚಣೆಯಿದ್ದರೆ ತಮ್ಮ ಗಮನಕ್ಕೆ ತರುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮತದಾನವನ್ನು ಹಬ್ಬದ ರೀತಿಯಲ್ಲಿ ಆಚರಿಸಿ, ತಮ್ಮ ಮತಗಟ್ಟೆಯಲ್ಲಿ ಹಬ್ಬದ ವಾತಾವರಣ ಸೃಷ್ಠಿ ಮಾಡಿ, ಮತಗಟ್ಟೆಯಲ್ಲಿ ಈ ವಾತಾವರಣ ಸೃಷ್ಠಿ ಮಾಡಲು ವಿದ್ಯಾರ್ಥಿಗಳ ಬಳಿ ಯೋಜನೆಗಳಿದ್ದರೆ ತಿಳಿಸಿ, ಜಿಲ್ಲಾಡಳಿತದೊಂದಿಗೆ ಚುನಾವಣೆಯಲ್ಲಿ ಸಹಕರಿಸಿ ಎಂದು ಪ್ರಿಯಾಂಕ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply