LATEST NEWS
ಆಳ್ವಾಸ್ ನಲ್ಲಿ ವಿದ್ಯಾರ್ಥಿಗಳನ್ನು ಥಳಿಸಿದ ವಾರ್ಡನ್ ಮತ್ತು ಸಿಬಂದಿ : 20 ವಿದ್ಯಾರ್ಥಿಗಳಿಗೆ ಗಾಯ
ಆಳ್ವಾಸ್ ನಲ್ಲಿ ವಿದ್ಯಾರ್ಥಿಗಳನ್ನು ಥಳಿಸಿದ ವಾರ್ಡನ್ ಮತ್ತು ಸಿಬಂದಿ : 20 ವಿದ್ಯಾರ್ಥಿಗಳಿಗೆ ಗಾಯ
ಮಂಗಳೂರು, ಮಾರ್ಚ್ 18 : ಮೂಡುಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಕಾಲೇಜು ಇದೀಗ ಮತ್ತೆ ಸುದ್ದಿಯಲ್ಲಿದೆ. ಈ ಬಾರಿ ಕಾಲೇಜು ಸಿಬಂದಿಗಳು ಕಾಲೇಜಿನ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾರೆ.
ಶನಿವಾರ ರಾತ್ರಿ ಕಾಲೇಜ್ ಕ್ಯಾಂಪಸಿನ ಪುಷ್ಪಗಿರಿ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ.
ಕಾಲೇಜಿನ ಸಿಬಂದಿಗಳ ಈ ಕೃತ್ಯ ವಿರೋಧಿಸಿ ವಿದ್ಯಾರ್ಥಿಗಳು ಇಂದು ಕ್ಯಾಂಪಸ್ಸಿನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
ಹಲ್ಲೆಗೆ ಕಾರಣ :
ನಿನ್ನೆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಪರೀಕ್ಷೆಗಳು ಮುಗಿದ ಹಿನ್ನೆಲೆಯಲ್ಲಿ, ಹಾಸ್ಟೆಲ್ ನಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದರು.
ಆದರೆ ಈ ಸಂಭ್ರಮಾಚರಣೆಗೆ ಕಾಲೇಜಿನ ವಾರ್ಡನ್ ಮತ್ತು ಸಿಬಂದಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು.
ಇದನ್ನೇ ನೆಪ ಇಟ್ಟುಕೊಂಡು ವಾರ್ಡನ್ ಮತ್ತು ಕಾಲೇಜು ಸಿಬಂದಿಗಳು ಸೇರಿ ರಾತ್ರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಾಸ್ಟೆಲಿನ 20ಕ್ಕೂ ಹೆಚ್ವು ವಿದ್ಯಾರ್ಥಿಗಳು ಹಲ್ಲೆಗೊಳಗಾಗಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಕಾಲೇಜು ಸಿಬ್ಬಂದಿಗಳು ಸೇರಿ ಥಳಿಸುವ ವಿಡಿಯೋವನ್ನು ವಿದ್ಯಾರ್ಥಿಗಳು ಸ್ವತಃ ಮೊಬೈಲಿನಲ್ಲಿ ಚಿತ್ರೀಕರಿಸಿ, ಮಾಧ್ಯಮಗಳಿಗೆ ನೀಡಿದ್ದಾರೆ.
ಹಲ್ಲೆ ನಡೆಸಿದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.
You must be logged in to post a comment Login