KARNATAKA
ಅಶ್ಲೀಲ ಸಂದೇಶ ಕಳುಹಿಸಿದ ಉಪನ್ಯಾಸಕನನ್ನು ಕೂಡಿಹಾಕಿ ಥಳಿಸಿದ ವಿದ್ಯಾರ್ಥಿಗಳು!

ದಾವಣಗೆರೆ, ಮೇ 03: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಉಪನ್ಯಾಸಕನನ್ನು ವಿದ್ಯಾರ್ಥಿಗಳೇ ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿಯ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.
ಉಪನ್ಯಾಸಕ ವಿದ್ಯಾರ್ಥಿನಿಯರಿಗೆ ಪ್ರೀತಿ ಮಾಡುವಂತೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ವಿದ್ಯಾರ್ಥಿಗಳು ಶುಕ್ರವಾರ ಕಾಲೇಜ್ ಪ್ರಾರಂಭವಾಗುತ್ತಿದ್ದಂತೆ ಆಗಮಿಸಿದ ಉಪನ್ಯಾಸಕನನ್ನು ಪ್ರಶ್ನಿಸಿದ್ದಾರೆ. ಬಳಿಕ ಆತನಿಂದ ಮೊಬೈಲ್ ಪಡೆದು ಸಂದೇಶಗಳನ್ನು ನೋಡಿದ್ದಾರೆ.

ವಿದ್ಯಾರ್ಥಿಗಳು ಪ್ರಶ್ನಿಸಿದಾಗ ಸರಿಯಾಗಿ ಉತ್ತರ ನೀಡದೆ ಹರಿಹಾಯ್ದ ಉಪನ್ಯಾಸಕನನ್ನು ವಿದ್ಯಾರ್ಥಿಗಳು ಕೊಠಡಿಯಲ್ಲಿ ಥಳಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಉಪನ್ಯಾಸಕನನ್ನು ಚನ್ನಗಿರಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.