Connect with us

    LATEST NEWS

    ಕೊಂಚಾಡಿ ಬಾರ್ ನಲ್ಲಿ ವಿಧ್ಯಾರ್ಥಿಗಳಿಗಾಗಿ ‘ಸ್ಟೂಡೆಂಟ್ಸ್‌ ವೆಡ್‌ನಸ್ಡೆ ನೈಟ್‌’ – ಆಕ್ರೋಶದ ಬಳಿಕ ಕಾರ್ಯಕ್ರಮ ರದ್ದು ಮಾಡಿಸಿದ ಪೊಲೀಸರು

    ಮಂಗಳೂರು ಜುಲೈ 26: ವಿಧ್ಯಾರ್ಥಿಗಳಿಗಾಗಿ ಸ್ಟೂಡೆಂಟ್ಸ್ ವೆಡ್ ನಸ್ಡೆ ನೈಟ್ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿಧ್ಯಾರ್ಥಿಗಳಿಗೆ ಮುಕ್ತ ಆಹ್ವಾನ ನೀಡಿದ ಬಾರ್ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು. ಇದೀಗ ಕಾರ್ಯಕ್ರಮವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಅಬಕಾರಿ ಇಲಾಖೆ ಲಿಕ್ಕರ್ ಲಾಂಜ್ ವಿರುದ್ದ ಎಫ್ಐಆರ್ ದಾಖಲಿಸಿದೆ.


    ನಗರದ ದೇರೆಬೈಲ್‌ ಕೊಂಚಾಡಿಯಲ್ಲಿರುವ ಬಾರ್‌ ಒಂದರಲ್ಲಿ’ಸ್ಟೂಡೆಂಟ್ಸ್‌ ವೆಡ್‌ನಸ್ಡೆ ನೈಟ್‌’ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳನ್ನು ಮುಕ್ತವಾಗಿ ಆಹ್ವಾನಿಸಿದ್ದಾರೆ. ಸಂಜೆ 7ಗಂಟೆಯಿಂದ ಮಧ್ಯರಾತ್ರಿ ವರೆಗೆ ಈ ಕಾರ್ಯಕ್ರಮವನ್ನು ಆಯೋಜಿಸಲು ಸಮಯ ನಿಗದಿಪಡಿಸಲಾಗಿತ್ತು.

    ಕಾರ್ಯಕ್ರಮದಲ್ಲಿ ಆಹಾರ, ಮದ್ಯ, ಮ್ಯೂಸಿಕ್‌, ಮನೋರಂಜನಾ ಕಾರ್ಯಕ್ರಮಗಳಿರುವುದಾಗಿ ಪ್ರಚಾರ ಮಾಡಲಾಗಿತ್ತು. ಇಷ್ಟು ಮಾತ್ರವಲ್ಲದೆ ವಿದ್ಯಾರ್ಥಿಗಳು ಸ್ಕೂಲ್‌ ಐಡಿ (ಗುರುತು ಕಾರ್ಡ್‌) ತೋರಿಸಿದರೆ ಬಿಲ್‌ನಲ್ಲಿ ಶೇ.15ರಷ್ಟು ಕಡಿತದ ಆಫರ್‌ ನೀಡಲಾಗಿತ್ತು. ಈ ಇವೆಂಟ್‌ಗೆ ವಿದ್ಯಾರ್ಥಿನಿಯರು (ಹುಡುಗಿಯರು) ಬಂದರೆ ಅವರಿಗೆ ಫ್ರೀ ಶೂಟರ್ಸ್ (ಸ್ಪೆಷಲ್‌ ಆಫರ್‌) ನೀಡುವ ಭರವಸೆಯನ್ನು ನೀಡಲಾಗಿತ್ತು.
    ಕೊಂಚಾಡಿಯ ಬಾರ್‌ನಲ್ಲಿಆಯೋಜಿಸಿದ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದ್ದಂತೆ ಸಾರ್ವಜನಿಕರಿಂದ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾವೂರು ಪೊಲೀಸರು ಕಾರ್ಯಕ್ರಮವನ್ನೇ ರದ್ದು ಮಾಡಿಸಿದ್ದಾರೆ.

    ವಿದ್ಯಾರ್ಥಿಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಾರ್‌ನ ಮಾಲೀಕರಿಗೆ ಕಾವೂರು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ. ಇದು ಮಾತ್ರವಲ್ಲದೆ ಜಿಲ್ಲಾನ್ಯಾಯಾಲಯದ ಅಸಿಸ್ಟೆಂಟ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌(ಎಪಿಪಿ)ಗೆ ಪತ್ರ ಬರೆದು ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಪೊಲೀಸ್‌ ಮೂಲಗಳು ಸಲಹೆ ಕೇಳಿದ್ದಾರೆಂದು ತಿಳಿದು ಬಂದಿದೆ. ವಿದ್ಯಾರ್ಥಿಗಳನ್ನು ಬಾರ್‌ಗೆ ಆಹ್ವಾನಿಸಿ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಹಾಕಿದ್ದಕ್ಕಾಗಿ ಅಬಕಾರಿ ಇಲಾಖೆ ಈಗಾಗಲೇ 7ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ ಬಾರ್ ವಿರುದ್ದ ಎಫ್ಐಆರ್ ದಾಖಲಿಸಿದೆ.

    ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾನ್ಯಾಯಾಲಯದ ಅಸಿಸ್ಟೆಂಟ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌ಗೆ ಪತ್ರ ಬರೆದಿದ್ದು, ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಮಾಹಿತಿ ಕೇಳಿದ್ದೇವೆ. ಅವರ ಉತ್ತರ ಬಂದ ಕೂಡಲೇ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗ್ರವಾಲ್‌ ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *