DAKSHINA KANNADA
ಸುಬ್ರಹ್ಮಣ್ಯ: ಸೆಮಿಸ್ಟರ್ ಪರೀಕ್ಷೆ ಮುಂದೂಡದ ಹಿನ್ನಲೆ, ಜೀವ ಕೈಯಲ್ಲಿ ಹಿಡಿದು ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಗಳು
ಸುಬ್ರಹ್ಮಣ್ಯ,ಜುಲೈ 24 : ಬಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಗಿದೆ.
ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆ ಕಾರಣ ಪರೀಕ್ಷೆ ಮುಂದೂಡಿಕೆ ಆಗಿರಲಿಲ್ಲ. ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಬಂದಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸೆಮಿಸ್ಟರ್ ಪರೀಕ್ಷೆ ಮುಂದೂಡಲಿ ಎಂಬ ಆಗ್ರಹ ವ್ಯಕ್ತವಾಗಿದೆ. ಬೆಳಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಡೆಯಿತ್ತಿವೆ. ಕೊಡಗು ಜಿಲ್ಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿತ್ತು.
You must be logged in to post a comment Login