Connect with us

DAKSHINA KANNADA

ಹೊಳೆಗೆ ಬಿದ್ದು ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಮಾಜಿ ಸದಸ್ಯ ಸಾವು

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮಪಂಚಾಯತ್ ನ ಮಾಜಿ ಸದಸ್ಯರೊಬ್ಬರು ಹೊಳೆ ನೀರಿಗೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಸುಬ್ರಹ್ಮಣ್ಯ ಗ್ರಾ.ಪಂ ನ ಮಾಜಿ ಸದಸ್ಯ ಏನೆಕಲ್ಲು ಗ್ರಾಮದ ಕುಶಾಲಪ್ಪ ಪೂಜಾರಿ ಎಂದು ಗುರುತಿಸಲಾಗಿದ್ದು ಇವರು ಪತ್ನಿ ಹಾಲಿ ಸದಸ್ಯೆಯಾಗಿದ್ದಾರೆ.


ಗುರುವಾರ ಬೆಳಗ್ಗೆ ಮನೆಯಿಂದ ಹೊರ ಹೋದವರು ಹೊಳೆ ಬದಿ ನೀರಿಗೆ ಬಿದ್ದು ಮೃತಪಟ್ಟಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಹೃದಯಾಘಾತದಿಂದ ಮೃತಪಟ್ಟಿರಬೇಕು ಎನ್ನಲಾಗಿದೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಶವವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುಲಾಗಿದೆ. ಮೃತರು ಪತ್ನಿ ಹಾಲಿ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಶಶಿಕಲಾ ಜಿಕ್ಕನಮಜಲು, ಮಕ್ಕಳಾದ ಕೌಶಿಕ್, ಸುಮಂತ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.