DAKSHINA KANNADA
ಸುಬ್ರಹ್ಮಣ್ಯ ನೈತಿಕ ಪೊಲೀಸ್ ಗಿರಿ ಪ್ರಕರಣ – ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಸುಬ್ರಹ್ಮಣ್ಯ ನೈತಿಕ ಪೊಲೀಸ್ ಗಿರಿ ಪ್ರಕರಣ – ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು
ಮಂಗಳೂರು ಜನವರಿ 2: ಸುಬ್ರಹ್ಮಣ್ಯದಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತಾಗಿದ್ದಾರೆ. ಸುಬ್ರಹ್ಮಣ್ಯಕ್ಕೆ ಅನ್ಯಕೋಮಿನ ಯುವಕ ಯುವತಿಗೆ ಹಲ್ಲೆ ನಡೆಸಿದ ಆರೋಪದಡಿ ಸುಬ್ರಹ್ಮಣ್ಯ ಠಾಣೆಯ 2 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಸುಬ್ರಹ್ಮಣ್ಯ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್ 20 ರಂದು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಯುವತಿ ಹಾಗೂ ಇಬ್ಬರು ಯುವಕರನ್ನು ಸಾರ್ವಜನಿಕರು ಹಿಡಿದು ಸುಬ್ರಹ್ಮಣ್ಯ ಠಾಣೆಯ ಪೋಲೀಸರಿಗೆ ಒಪ್ಪಿಸಿದ್ದರು.

ಪೋಲೀಸರು ತಮ್ಮ ಮೇಲೆ ವಿನಾಕಾರಣ ಅಮಾನವೀಯ ವಾಗಿ ಹಲ್ಲೆ ನಡೆಸಿ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ಆರೋಪಿಸಿದ್ದಳು. ಪೊಲೀಸರು ತನಗೆ ಹಾಗು ತನ್ನ ಜೊತೆಯಿದ್ದ ಮುಸ್ಲಿಂ ಯುವಕರಿಗೆ ಮುಸ್ಲಿಂ ಎನ್ನುವ ಕಾರಣಕ್ಕೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಯುವತಿ ಸಾಮಾಜಿಕ ಜಾಲತಾಣದಲ್ಲಿ ತನ್ನ ಹೇಳಿಕೆಯನ್ನು ಹರಿಬಿಟ್ಟಿದ್ದಳು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಸುದೀರ್ ಕುಮಾರ್ ರೆಡ್ಡಿ ತನಿಖೆ ನಡೆಸಿ ಈಗ ಇಬ್ಬರು ಸಿಬ್ಬಂದಿಗಳಾದ ಪ್ರಶಾಂತ್ ಕುಮಾರ್ ಮತ್ತು ಸಂಧ್ಯಾ ಕುಮಾರಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಎಸ್ಪಿ ಆದೇಶಿಸಿದ್ದಾರೆ.