DAKSHINA KANNADA
ಮುಖ್ಯಮಂತ್ರಿಗಳ ಆಶ್ವಾಸನೆ ಹಿನ್ನಲೆಯಲ್ಲಿ ಉಪವಾಸ ಕೈ ಬಿಟ್ಟ ಶ್ರೀ ವಿದ್ಯಾಪ್ರಸನ್ನ ಸ್ವಾಮಿಜಿ
ಮುಖ್ಯಮಂತ್ರಿಗಳ ಆಶ್ವಾಸನೆ ಹಿನ್ನಲೆಯಲ್ಲಿ ಉಪವಾಸ ಕೈ ಬಿಟ್ಟ ಶ್ರೀ ವಿದ್ಯಾಪ್ರಸನ್ನ ಸ್ವಾಮಿಜಿ
ಮಂಗಳೂರು ಅಕ್ಟೋಬರ್ 15: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯಿಂದ ಕಿರುಕುಳ-ಅವಮಾನವಾಗುತ್ತಿದ್ದು, ನಿತ್ಯಾನುಷ್ಠಾನಕ್ಕೂ ತೊಂದರೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶ್ರೀಸಂಪುಟ ನರಸಿಂಹಸ್ವಾಮಿ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆರಂಭಿಸಿದ್ದ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿ ಶನಿವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
ಈ ಬಗ್ಗೆ ನಿನ್ನೆ ದಕ್ಷಿಣಕನ್ನಡ ಜಿಲ್ಲೆಗೆ ನಿನ್ನೆ ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಮೈತ್ರಿ ಸರಕಾರದ ಆಡಳಿತದಲ್ಲಿ ಜನ ಸಾಮಾನ್ಯರಾಗಲಿ , ಸ್ವಾಮೀಜಿಯಾಗಲಿ ಯಾರೂ ಪ್ರತಿಭಟನೆ, ನಿರಶನ ಕೈಗೊಳ್ಳುವ ಸಂದರ್ಭ ಬರ ಬಾರದು ಎನ್ನುವುದು ನನ್ನ ಆದ್ಯತೆ ಎಂದು ಹೇಳಿದ ಅವರು ನವರಾತ್ರಿ ಸಂದರ್ಭದಲ್ಲಿ ನೀವು ಉಪವಾಸ ಮಾಡಬಾರದು , ಏನೇ ಸಮಸ್ಯೆ ಇದ್ದರೂ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಸುಬ್ರಹ್ಮಣ್ಯ ಮಠದ ಯತಿಗಳಲ್ಲಿ ಮನವಿ ಮಾಡಿದ್ದರು.
ಈ ಹಿನ್ನಲೆಯಲ್ಲಿ ಸಮಸ್ಯೆ ಬಗೆಹರಿಸುವ ಬಗ್ಗೆ ಮುಖ್ಯಮಂತ್ರಿಗಳು ಆಶ್ವಾಸನೆ ನೀಡಿದ ಹಿನ್ನಲೆಯಲ್ಲಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಕಳೆದ ಎರಡು ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಕೈ ಬಿಟ್ಟಿದ್ದಾರೆ.