Connect with us

    FILM

    ಬಿಗ್ ಬಾಸ್ ಶೋ ಗೆ ಕಿಚ್ಚ ಸುದೀಪ್ ವಿದಾಯ – ಇದೇ ನನ್ನ ಕೊನೆಯ ಸೀಸನ್ ಎಂದ ಕಿಚ್ಚ

    ಬೆಂಗಳೂರು ಅಕ್ಟೋಬರ್ 14: ಬಿಗ್ ಬಾಸ್ ಸೀಸನ್ 11 ಕಲರ್ಸ್ ಕನ್ನಡದಲ್ಲಿ ಪ್ರಾರಂಭವಾಗಿ ಎರಡು ವಾರ ಕಳೆದಿದೆ. ಈಗಗಾಲೇ ಶೋ ಉತ್ತಮ ಟಿಆರ್ ಪಿ ಯನ್ನು ಪಡೆದಿದೆ. ಈ ನಡುವೆ ರಾಜ್ಯಕ್ಕೆ ಶಾಕಿಂಗ ಸುದ್ದಿಯನ್ನು ಕಿಚ್ಚ ಸುದೀಪ್ ನೀಡಿದ್ದಾರೆ. ಇದೇ ನನ್ನ ಕೊನೆಯ ಬಿಗ್ ಬಾಸ್ ಸೀಸನ್ ಎಂದು ಹೇಳುವ ಮೂಲಕ ಬಿಗ್ ಬಾಸ್ ಗೆ ವಿದಾಯ ಹೇಳಿದ್ದಾರೆ.


    ಸೋಶಿಯಲ್ ಮೀಡಿಯಾ ಮೂಲಕ ಅವರು ಅಧಿಕೃತವಾಗಿಯೇ ಈ ನಿರ್ಧಾರ ತಿಳಿಸಿದ್ದಾರೆ. ಅವರ ಈ ಪೋಸ್ಟ್ ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ. ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ’ ಎಂದು ಸುದೀಪ್ ಅವರು ಹೇಳಿದ್ದಾರೆ.

     

    ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​. ಇಷ್ಟು ವರ್ಷಗಳ ಕಾಲ ಬಿಗ್​ ಬಾಸ್​ ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್​ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ’ ಎಂದು ಸುದೀಪ್​ ಅವರು ಶಾಕಿಂಗ್​ ವಿಷಯ ತಿಳಿಸಿದ್ದಾರೆ.

    11ನೇ ಸೀಸನ್​ ಆರಂಭದಲ್ಲೇ ಸುದೀಪ್ ಅವರು ಈ ಬಾರಿ ಬಿಗ್​ ಬಾಸ್​ ನಿರೂಪಣೆ ಮಾಡುವುದು ಅನುಮಾನ ಎಂಬ ವಿಷಯ ಕೇಳಿಬಂದಿತ್ತು. ಆದರೆ ಶೋ ಆಯೋಜಕರು ಸುದೀಪ್​ ಅವರ ಮನ ಒಲಿಸಿದ್ದರಿಂದ ಅವರು ಮುಂದುವರಿದರು. ಆದರೆ ಇದು ಅವರ ಕೊನೆಯ ಸೀಸನ್​ ಆಗುತ್ತಿದೆ. ‘ನೀವು ಇಲ್ಲದೇ ಬಿಗ್ ಬಾಸ್​ ಕಾರ್ಯಕ್ರಮವನ್ನು ಊಹಿಸಿಕೊಳ್ಳಲು ಕೂಡ ಸಾಧ್ಯವಿಲ್ಲ’ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ‘ಇದು ಸರಿಯಾದ ನಿರ್ಧಾರ’ ಎಂದು ಕೂಡ ಕೆಲವರು ಅಭಿಪ್ರಾಯಪಟ್ಟಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply