KARNATAKA
ಕನ್ನಡಿಗರನ್ನು ಎದುರು ಹಾಕಿಕೊಂಡವಳಿಗೆ ತಕ್ಕಪಾಠ – ಕೆಲಸದಿಂದಲೇ ವಜಾ….!!
ಬೆಂಗಳೂರು ಸೆಪ್ಟೆಂಬರ್ 23: : ನಾವಿದ್ದರೆ ಬೆಂಗಳೂರು. ಹಾಗೇನಾದರೂ ನಾವೆಲ್ಲರೂ ಬೆಂಗಳೂರು ಬಿಟ್ಟು ಹೋದರೆ, ಇಡೀ ಊರೇ ಖಾಲಿಯಾಗುತ್ತದೆ. ಕೋರಮಂಗಲದ ಪಬ್‌ಗಳೆಲ್ಲಾ ಖಾಲಿ ಹೊಡೆಯುತ್ತದೆ ಎಂದು ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ಹಾಕಿ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದ ಸುಗಂಧ್ ಶರ್ಮ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾಳೆ.
ಸುಗಂಧ್ ಶರ್ಮ ಸೋಶಿಯಲ್ ಮೀಡಿಯಾದಲ್ಲಿ ಬೆಂಗಳೂರು ಕುರಿತಂತೆ ಮಾಡಿದ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಆಕೆ ಕೆಲಸ ಮಾಡುತ್ತಿದ್ದ ಕಂಪೆನಿ ಎಚ್ಚೆತ್ತುಕೊಂಡಿದ್ದು, ಆಕೆಯನ್ನು ಕೆಲಸದಿಂದಲೇ ತೆಗೆದು ಹಾಕಿದೆ.
ಬೆಂಗಳೂರಿನ ಫ್ರೀಡಂ ಕಂಪನಿಯಲ್ಲಿ ಸುಗಂಧ ಶರ್ಮ ಕೆಲಸ ಮಾಡುತ್ತಿದ್ದರು. ಸದ್ಯ ಮಹಿಳೆಯನ್ನ ಫ್ರೀಡಂ ಕಂಪನಿ ಟರ್ಮಿನೇಟ್ ಮಾಡಿದೆ. ಫ್ರೀಡಂ ಕಂಪನಿಗೆ ತೆರಳಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದರ ಮಾಹಿತಿ ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಕೆ ಬೇರೆ ಯಾವುದೇ ಕಂಪನಿಯಲ್ಲಿ ಕೆಲಸ ನಿರ್ವಹಿಸಿದರೂ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ನಾನು ಆ ರೀತಿ ಹೇಳಿಲ್ಲ, ಅದೊಂದು ಹಾಸ್ಯಭರಿತ ಮಾತಾಗಿತ್ತು ಎಂದು ಹೇಳಿ, ನನಗೆ ಕನ್ನಡ ಅಂದ್ರೆ ತುಂಬಾ ಇಷ್ಟ, ಕನ್ನಡ ಕಲಿಯಲು ಪ್ರಯತ್ನ ಮಾಡ್ತಿದ್ದೇನೆ ಎಂದು ತಿಪ್ಪೆ ಸಾರಿಸುವ ಪ್ರಯತ್ನ ಮಾಡಿ ರೀಲ್ಸ್ ಪೋಸ್ಟ್ ಮಾಡಿದ್ದರು.
Ok get l0st .. it’s our problem!
I lived Delhi for a bit, nightmare for personal safety and hell for an outsider. It’s not about leaving Bengaluru, it’s about respecting the local culture d!mwit! pic.twitter.com/iZwYON0FYu
— Divya Kamat (@divi_tatatal) September 21, 2024