LATEST NEWS
ಸುಹಾಸ್ ಶೆಟ್ಟಿ ಹ*ತ್ಯೆ ಬಳಿಕ ವಿವಿಧ ಸಂಘಟನೆಗಳ ಮುಖಂಡರಿಗೆ ಜೀವ ಬೆದರಿಕೆ ಪೋಸ್ಟ್ – ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್

ಮಂಗಳೂರು, ಮೇ 5: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿವಿಧ ಸಂಘಟನೆಗಳ ಮುಖಂಡರಿಗೆ ಜೀವ ಬೇದರಿಕೆ ಪೋಸ್ಟ್ ಗಳನ್ನು ಹಾಕಲಾಗುತ್ತಿದ್ದು, ಈ ಹಿನ್ನಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರಣ್ ಪಂಪ್ವೆಲ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು. ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ (Sharan Pumpwell) ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ.

ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ‘‘ಅಶ್ರಫ್ ಕೊಂದ ಭರತ್ನನ್ನು ಮರೆತಿಲ್ಲ ಎಂದು ಕಿಡಿಗೇಡಿಗಳು ಪೋಸ್ಟ್ ಹಾಕಿದ್ದರು. ‘‘Wait and watch’’ ಎಂದು ತಲ್ವಾರ್ ಫೋಟೋ ಪೋಸ್ಟ್ ಮಾಡಿದ್ದರು.
ಎಸ್ಡಿಪಿಐ ಮುಖಂಡ ರಿಯಾಜ್ ಕಡಂಬು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕೊಲೆ ಬೆದರಿಕೆ ಹಾಕಿದ ಕೆ.ಆರ್ ರಾಕೇಶ್ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಸುಹಾಸ್ ಶೆಟ್ಟಿ ಕೊಲೆ ಸುದ್ದಿ ಪ್ರಸಾರವಾಗುತ್ತಿದ್ದ ವೇಳೆ ಕಮೆಂಟ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ‘‘Next is Riyaz Kadanbu hit list’’ ಎಂದು @Krrakesh9456 ಖಾತೆ ಮೂಲಕ ಕಮೆಂಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಿಯಾಜ್ ಕಡಂಬು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.