LATEST NEWS
ನಾಡಕೋವಿಯಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ
ಕಾರ್ಕಳ, ಮಾರ್ಚ್ 18: ನಾಡ ಕೋವಿಯಿಂದ ಗುಂಡಿಕ್ಕಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ನಡೆದಿದೆ.
ವಿಶಾಖ ಪೂಜಾರಿ (30)ಆತ್ಮಹತ್ಯೆ ಮಾಡಿಕೊಂಡ ಯುವಕ ನಾಗಿದ್ದು, ತಿರುಗಾಡಿ ಬರುವುದಾಗಿ ಮನೆಯಿಂದ ತೆರಳಿದ ವಿಶಾಖ ಪೂಜಾರಿ ತದ ನಂತರ ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಮನೆಯ ತೋಟದಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login