ಹೆಬ್ರಿ : ತನ್ನ ಪ್ರಿಯಕರ ಮೊಬೈಲ್ ಪೋನ್ ಕರೆ ಸ್ವೀಕರಿಸಿಲ್ಲ ಎಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲ್ಲೂಕು ಕಳ್ತೂರು ಗ್ರಾಮದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ.

ಯುವತಿಯನ್ನು ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಕುಸುಮಾ(19) ಎಂದು ಗುರುತಿಸಲಾಗಿದೆ. ಸಂತೆಕಟ್ಟೆಯಲ್ಲಿ ಹೋಂ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದರು.ಇವರು ಚಿಕ್ಕಮಗಳೂರು ಜಿಲ್ಲೆಯ ರಾಹುಲ್ ಎಂಬವರನ್ನು ಪ್ರೀತಿ ಮಾಡುತ್ತಿದ್ದು, ಆತನ ಪೋನ್ ಕರೆಯನ್ನು ಸ್ವೀಕರಿಸಿಲ್ಲ ಎಂಬ ಕಾರಣದಿಂದ ಬೇಸರಗೊಂಡು ಕುಸುಮಾ, ಎಪ್ರಿಲ್ 11ರಂದು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಎಪ್ರಿಲ್ 13ರಂದು ತೀವ್ರವಾಗಿ ಅಸ್ವಸ್ಥಗೊಂಡ ಆಕೆಯನ್ನು ಉಡುಪಿ ಅಜ್ಜರ ಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎಪ್ರಿಲ್ 17ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.