ಸುಬ್ರಹ್ಮಣ್ಯ : ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

ಪುತ್ತೂರು ನವೆಂಬರ್ 26: ಮಂಗಳೂರಿನ ಯುವಕನೊಬ್ಬ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಂಗಳೂರಿನ ಉಳ್ಳಾಲ ರೈಲ್ವೇ ನಿಲ್ದಾಣ ಬಳಿಯ ನಿವಾಸಿ ಪವನ್ ಕುಮಾರ್ ಎಂದು ಗುರುತಿಸಲಾಗಿದೆ.

ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದ ಸಮೀಪ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಥಳೀಯ ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಯುವಕನ ಮೃತದೇಹವು ಕಂಡು ಬಂದಿದೆ. ಕೂಡಲೇ ಅವರು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.