DAKSHINA KANNADA
ವಿವಾಹಿತ ಮಹಿಳೆಯ ನೇಣು ಬಿಗಿದು ಆತ್ಮಹತ್ಯೆ ಶರಣು

ಸುಳ್ಯ: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ.
ಶರತ್ ಎಂಬವರ ಪತ್ನಿ ಮಲ್ಲಿಕಾ(26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯಾಗಿದ್ದಾಳೆ. ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು.

ನಿನ್ನೆ ರಜೆ ಹಿನ್ನಲೆ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.