Connect with us

  DAKSHINA KANNADA

  ಸೈಕಲ್ ರಿಪೇರಿ ಮಾಡಿಲ್ಲ ಎಂದು ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾಲಕ

  ಉಪ್ಪಿನಂಗಡಿ ಎಪ್ರಿಲ್ 20: ಮನೆಯವರು ಸೈಕಲ್ ರಿಪೇರಿ ಮಾಡಿಲ್ಲ ಎಂದು 8ನೇ ತರಗತಿಯ ಬಾಲಕ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ.


  ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು 13 ವರ್ಷ ಪ್ರಾಯ ನಂದನ್ ಎಂದು ಗುರುತಿಸಲಾಗಿದೆ. ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ.

  ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ಈತ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ತಿಳಿಸಿದ್ದರೆನ್ನಲಾಗಿದೆ. ಇದರಿಂದ ಮನನೊಂದ ಆತ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿಕೊಂಡು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply