ಅನಾರೋಗ್ಯಪೀಡಿತ ಗೃಹಿಣಿ ಆತ್ಮಹತ್ಯೆ
ಉಡುಪಿ ಫೆಬ್ರವರಿ 19: ಅನಾರೋಗ್ಯ ಪೀಡಿತ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ. ಅವರಾಲು ಮಟ್ಟು ಕರಿಯ ಮನೆ ನಿವಾಸಿಯಾಗಿರುವ ಲೀಲಾ ಪೂಜಾರ್ತಿ (36) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಲೀಲಾ ಪೂಜಾರ್ತಿ ಅವರ ಕಳೆದ ಮೂರು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಈ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಇಬ್ಬರು ಮಕ್ಕಳ ತಾಯಿಯಾಗಿರುವ ಲೀಲಾ ಪೂಜಾರ್ತಿ ರಾತ್ರಿ ಸೀಮೆ ಎಣ್ಣೆ ಸುರಿದು ಬೆಂಕಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.