LATEST NEWS
ಮಧ್ಯಪ್ರದೇಶ : ಆಗಸದಲ್ಲೇ ಡಿಕ್ಕಿಯಾದ ಸುಖೋಯ್-30 ಮತ್ತು ಮಿರಾಜ್ 2000 ಯುದ್ದ ವಿಮಾನ

ಮಧ್ಯಪ್ರದೇಶ ಜನವರಿ 28: ಸುಖೋಯ್-30 ಮತ್ತು ಮಿರಾಜ್ 2000 ವಿಮಾನಗಳು ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಮೊರೆನಾ ಬಳಿ ಪತನಗೊಂಡಿವೆ. ಮಧ್ಯಪ್ರದೇಶದ ಗ್ವಾಲಿಯರ್ ಏರ್‌ಬೇಸ್‌ನಿಂದ ಹೊರಟಿದ್ದ ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ತಿಳಿದುಬಂದಿದೆ,
ಆದರೆ, ಈ ಅವಘಡಕ್ಕೆ ಕಾರಣ ಈವರೆಗೆ ತಿಳಿದುಬಂದಿಲ್ಲ. ಇನ್ನು, ಸ್ಥಳದಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ರಕ್ಷಣಾ ಮೂಲಗಳು ಮಾಹಿತಿ ನೀಡಿವೆ. ಎರಡೂ ಯುದ್ಧ ವಿಮಾನಗಳು ಡಿಕ್ಕಿ ಹೊಡೆದುಕೊಂಡಿದ್ದು, ಈ ಬಗ್ಗೆ ತನಿಖೆ ಮಾಡಲಾಗುವುದು ಎಂದು ಭಾರತೀಯ ವಾಯುಪಡೆ ತಿಳಿಸಿದೆ.

ಸುಖೋಯ್ – 30 ಯುದ್ಧ ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರು. ಈ ಪೈಕಿ, ಒಬ್ಬರನ್ನು ರಕ್ಷಿಸಲಾಗಿದ್ದು, ಅವರು ಬದುಕುಳಿದಿದ್ದಾರೆ. ಅಲ್ಲದೆ, ಮಿರಾಜ್ 2000 ವಿಮಾನದಲ್ಲಿ ಒಬ್ಬರು ಪೈಲಟ್ ಇದ್ದು, ಅವರು ಸಹ ಬದುಕುಳಿದಿದ್ದಾರೆಂದು ತಿಳಿದುಬಂದಿದೆ.
ಈ ಇಬ್ಬರು ಪೈಲಟ್‌ಗಳಿಗೆ ಗಾಯಗಳಾಗಿದ್ದು, ಓರ್ವ ಪೈಲೆಟ್ ಸಾವನ್ನಪ್ಪಿದ್ದಾರೆಂದು ಎಂದು ವರದಿಗಳು ತಿಳಿಸಿವೆ. ಇಬ್ಬರು ಪೈಲಟ್‌ಗಳು ಸುರಕ್ಷಿವಾಗಿರುವ ಬಗ್ಗೆ ಮೊರೆನಾ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ಇಬ್ಬರನ್ನು ಸುರಕ್ಷಿತವಾಗಿ ಯುದ್ಧ ವಿಮಾನಗಳಿಂದ ಕಾಪಾಡಲಾಗಿದೆ ಎಂದು ತಿಳಿದುಬಂದಿದೆ.