Connect with us

LATEST NEWS

ಮಧ್ಯಪ್ರದೇಶ : ಆಗಸದಲ್ಲೇ ಡಿಕ್ಕಿಯಾದ ಸುಖೋಯ್-30 ಮತ್ತು ಮಿರಾಜ್ 2000 ಯುದ್ದ ವಿಮಾನ

ಮಧ್ಯಪ್ರದೇಶ ಜನವರಿ 28: ಸುಖೋಯ್-30 ಮತ್ತು ಮಿರಾಜ್ 2000 ವಿಮಾನಗಳು ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಮೊರೆನಾ ಬಳಿ ಪತನಗೊಂಡಿವೆ.  ಮಧ್ಯಪ್ರದೇಶದ ಗ್ವಾಲಿಯರ್‌ ಏರ್‌ಬೇಸ್‌ನಿಂದ ಹೊರಟಿದ್ದ ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ತಿಳಿದುಬಂದಿದೆ,

ಆದರೆ, ಈ ಅವಘಡಕ್ಕೆ ಕಾರಣ ಈವರೆಗೆ ತಿಳಿದುಬಂದಿಲ್ಲ. ಇನ್ನು, ಸ್ಥಳದಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ರಕ್ಷಣಾ ಮೂಲಗಳು ಮಾಹಿತಿ ನೀಡಿವೆ. ಎರಡೂ ಯುದ್ಧ ವಿಮಾನಗಳು ಡಿಕ್ಕಿ ಹೊಡೆದುಕೊಂಡಿದ್ದು, ಈ ಬಗ್ಗೆ ತನಿಖೆ ಮಾಡಲಾಗುವುದು ಎಂದು ಭಾರತೀಯ ವಾಯುಪಡೆ ತಿಳಿಸಿದೆ.

ಸುಖೋಯ್ – 30 ಯುದ್ಧ ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರು. ಈ ಪೈಕಿ, ಒಬ್ಬರನ್ನು ರಕ್ಷಿಸಲಾಗಿದ್ದು, ಅವರು ಬದುಕುಳಿದಿದ್ದಾರೆ. ಅಲ್ಲದೆ, ಮಿರಾಜ್ 2000 ವಿಮಾನದಲ್ಲಿ ಒಬ್ಬರು ಪೈಲಟ್‌ ಇದ್ದು, ಅವರು ಸಹ ಬದುಕುಳಿದಿದ್ದಾರೆಂದು ತಿಳಿದುಬಂದಿದೆ.
ಈ ಇಬ್ಬರು ಪೈಲಟ್‌ಗಳಿಗೆ ಗಾಯಗಳಾಗಿದ್ದು, ಓರ್ವ ಪೈಲೆಟ್ ಸಾವನ್ನಪ್ಪಿದ್ದಾರೆಂದು ಎಂದು ವರದಿಗಳು ತಿಳಿಸಿವೆ. ಇಬ್ಬರು ಪೈಲಟ್‌ಗಳು ಸುರಕ್ಷಿವಾಗಿರುವ ಬಗ್ಗೆ ಮೊರೆನಾ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ಇಬ್ಬರನ್ನು ಸುರಕ್ಷಿತವಾಗಿ ಯುದ್ಧ ವಿಮಾನಗಳಿಂದ ಕಾಪಾಡಲಾಗಿದೆ ಎಂದು ತಿಳಿದುಬಂದಿದೆ.

 

 

 

 

Share Information
Advertisement
Click to comment

You must be logged in to post a comment Login

Leave a Reply