LATEST NEWS
ನನಗೆ ಟಿಕೆಟ್ ಕೊಡಲಿಲ್ಲ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ – ನಾಡಿದ್ದು ಹೋಗಿ ಬಿಜೆಪಿಗೆ ಮತ ಹಾಕುತ್ತೇನೆ

ಉಡುಪಿ ಮೇ 06: ಬೈಂದೂರು ಕ್ಷೇತ್ರದಲ್ಲಿ ಟಿಕೆಟ್ ಮಿಸ್ ಆಗಿ ಮುನಿಸಿಕೊಂಡಿರುವ ಶಾಸಕ ಸುಕುಮಾರ್ ಶೆಟ್ಟಿ, ಬಿಜೆಪಿಯ ಯಾವುದೇ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೇ ತಟಸ್ಥರಾಗಿದ್ದಾರೆ. ನನ್ನ ಮನಸ್ಸಿಗೆ ಆಗಿರುವ ನೋವು, ಆಘಾತ ಇನ್ನೂ ಕಡಿಮೆಯಾಗಿಲ್ಲ. ನಾನು ಈ ಕ್ಷಣದವರೆಗೆ ತಟಸ್ಥವಾಗಿದ್ದೇನೆ. ನಾಡಿದ್ದು ಹೋಗಿ ಬಿಜೆಪಿಗೆ ಮತ ಹಾಕುತ್ತೇನೆ ಎಂದು ಉಡುಪಿ ಜಿಲ್ಲೆಯ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ತಿಳಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪಕ್ಷ ವಿರೋಧಿ ಚಟುವಟಿಕೆ ಮಾಡುವ ಸಣ್ಣ ಮನುಷ್ಯ ನಾನಲ್ಲ. ಎದುರಾಳಿ ಪಕ್ಷದ ಜೊತೆ ಕೈಜೋಡಿಸಿದ್ದೇನೆ ಎಂದು ಆರೋಪಿಸುವವರು ಕೀಳು ಮನಸ್ಸಿನವರು. ಪಕ್ಷಾಂತರ ಪಕ್ಷವಿರೋಧಿ ಚಟುವಟಿಕೆ ಮಾಡಿಲ್ಲ ಎಂದು ಹೇಳಿದರು.

ಹಿರಿಯ ನಾಯಕರ ಮೇಲೆ ಗೌರವ ಇದೆ. ಆದರೆ ಪಕ್ಷಕ್ಕೆ ನನ್ನ ಅಭ್ಯರ್ಥಿತನ ಬೇಡವಾಗಿದೆ. ಹಾಗಾಗಿ ನಾನು ಯಾವುದೇ ಪ್ರಚಾರ ಸಭೆ, ರಾಲಿಗಳಲ್ಲಿ ಭಾಗಿ ಆಗಿಲ್ಲ ಯಾವ ಕಾರಣಕ್ಕೆ ನನಗೆ ಟಿಕೆಟ್ ಕೊಡಲಿಲ್ಲ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.