LATEST NEWS
ಸುಳ್ಯ : ಚಲಿಸುತ್ತಿದ್ದ KSRTC ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ

ಸುಳ್ಯ; ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡದ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ.

ಸುಳ್ಯ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೊರಡುತ್ತಿದ್ದ ಸರ್ಕಾರಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ನಿಲ್ದಾಣದಲ್ಲೇ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೋಡಲೇ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Continue Reading