DAKSHINA KANNADA
ಸುಳ್ಯ – ಭೀಕರ ರಸ್ತೆ ಅಪಘಾತಕ್ಕೆ ಕಾರಿನಿಂದ ಬೇರ್ಪಟ್ಟ ಇಂಜಿನ್..ಕಾರಿನಲ್ಲಿದ್ದವರು ಗ್ರೇಟ್ ಎಸ್ಕೇಪ್
ಸುಳ್ಯ ಫೆಬ್ರವರಿ 04: ಟ್ಯಾಂಕರ್ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಪವಾಡ ಸದೃಶ್ಯ ಪಾರಾದ ಘಟನೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ರವಿವಾರ ಬೆಳಿಗ್ಗೆ ಸಂಭವಿಸಿದೆ.
ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ವಿಪ್ಟ್ ಕಾರು ಮತ್ತು ಸುಳ್ಯ ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನ ಇಂಜಿನ್ ಕಾರಿನಿಂದ ಬೇರ್ಪಟ್ಟು ದೂರಕ್ಕೆ ಎಸೆಯಲ್ಪಟ್ಟಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾಸರಗೋಡು ಮೂಲದ ಐದು ಮಂದಿ ಯುವಕರು ಪವಾಡ ಸದೃಶ್ಯ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
You must be logged in to post a comment Login