DAKSHINA KANNADA
ಸುಳ್ಯ – ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಮಹಿಳೆ ಸಾವು

ಸುಳ್ಯ ಜುಲೈ 28: ರಸ್ತೆ ದಾಟುತ್ತಿರುವಾಗ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಲ್ಲುಗುಂಡಿ ಪೋಸ್ಟ್ ಆಫೀಸ್ ಬಳಿ ನಡೆದಿದೆ.
ಮೃತರನ್ನು ಸಂಪಾಜೆ ಬೈಲು ನಿವಾಸಿ ಕೊ. ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಮಾರ್ ಚೆದ್ಕಾರ್ ಅವರ ತಾಯಿ ಕಮಲ ಚೆದ್ಕಾರ್ (67) ಎಂದು ಗುರುತಿಸಲಾಗಿದೆ. ಅವರು ಕಲ್ಲುಗುಂಡಿಯ ಅಂಚೆ ಕಚೇರಿಯ ಬಳಿ ಬಸ್ ತಂಗುದಾಣದಿಂದ ಸಂಪಾಜೆ ಕಡೆ ಹೋಗುವ ಬಸ್ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ, ಅದೇ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಕೇರಳ ಮೂಲದ ಬೈಕ್ ನಿಯಂತ್ರಣ ತಪ್ಪಿ ಅವರಿಗೆ ಡಿಕ್ಕಿ ಹೊಡೆಯಿತು. ಪರಿಣಾಮವಾಗಿ ಮಹಿಳೆಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ತಿಳಿದು ಬಂದಿದೆ.
