DAKSHINA KANNADA
ಸುಳ್ಯ – ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು

ಸುಳ್ಯ ಫೆಬ್ರವರಿ 10: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಘಟನೆ ಸುಳ್ಯ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಶನಿವಾರ ರಾತ್ರಿ ನಡೆದಿದೆ.
ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಫುಟ್ಬಾತ್ ಮೇಲೆ ಹತ್ತಿದ ಪರಿಣಾಮ ಅಲ್ಲೇ ಪಕ್ಕದಲ್ಲಿ ಇರಿಸಲಾಗಿದ್ದ ಹಾಲಿನ ಪ್ಯಾಕೇಟ್‍ನ ಖಾಲಿ ಬಾಕ್ಸ್ ಗಳು ಚೆಲ್ಲಾಪಿಲ್ಲಿಯಾಗಿದೆ. ಅದೃಷ್ಟವಶಾತ್ ಸ್ಥಳದಲ್ಲಿ ಸಾರ್ವಜನಿಕರು ಯಾರು ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದೆ. ಕಾರಿನಲ್ಲಿ ಮಕ್ಕಳು, ಮಹಿಳೆಯರು ಇದ್ದು ಯಾರಿಗೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
