DAKSHINA KANNADA
ಸುಳ್ಯ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಡಿಸೇಲ್ ಟ್ಯಾಂಕರ್

ಸುಳ್ಯ ಅಕ್ಟೋಬರ್ 30: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿಯೊಂದು ಪಲ್ಟಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಕಾರು ಸಮೀಪ ಬೈತ್ತಡ್ಕ ತಿರುವಿನಲ್ಲಿ ನಡೆದಿದೆ.
ಘಟನೆಯಲ್ಲಿ ಟ್ಯಾಂಕರ್ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಕೊಂಡೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ನಿಂದ ಡೀಸೆಲ್ ಸೋರಿಕೆಯಾಗುತ್ತಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆ ಆರಂಭಿಸಿದ್ದಾರೆ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ.
