DAKSHINA KANNADA
ಸುಳ್ಯ – ಹಲವೆಡೆ ಭೂಂಕಪದ ಅನುಭವ…..!!
ಸುಳ್ಯ, ಜೂನ್ 25: ಸುಳ್ಯ ತಾಲೂಕಿನ ಹಲವು ಪ್ರದೇಶಗಳಲ್ಲಿ ಜನರಿಗೆ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ.
ಜನ ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿದ್ದು, ಕಪಾಟಿನಲ್ಲಿಟ್ಟಿದ್ದ ಪಾತ್ರೆ ಮತ್ತಿತರ ವಸ್ತುಗಳು ಕೆಳಗೆ ಬಿದ್ದಿದೆ. ಕೆಲವು ಮನೆಗಳ ಗೋಡೆಗಳು ಸಹ ಬಿರುಕುಬಿಟ್ಟಿದ್ದು, ಮನೆಯ ಮೇಲ್ಭಾಗಕ್ಕೆ ಹಾಕಲಾದ ಡಬ್ಬಿ, ಶೀಟ್ಗಳು ಕೂಡಾ ಅಲುಗಾಡಿವೆ.
ಬೆಳಗ್ಗಿನ ಕೆಲಸದಲ್ಲಿ ತಲ್ಲೀನರಾಗಿದ್ದವರಿಗೆ ಕೆಲಸ ಮಾಡುತ್ತಿದ್ದಾಗಲೇ ಕೈಲಿದ್ದ ವಸ್ತುಗಳು ಅಲುಗಾಡಿದಂತ ಅನುಭವ ಉಂಟಾಗಿದೆ. ಈ ಬಗ್ಗೆ ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಇನ್ನಷ್ಟೆ ಬರಬೇಕಾಗಿದೆ.
You must be logged in to post a comment Login