ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನ ಇಬ್ಬರ ಬಂಧನ

ಸುಳ್ಯ ಅಗಸ್ಟ್ 18: ಸುಳ್ಯದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದು ಬಂಧಿತರಿಂದ ಸುಮಾರು 1.394 ಕೆಜಿ ಯಷ್ಟು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಸುಳ್ಯ ನಿವಾಸಿ ತೀರ್ಥಪ್ರಸಾದ್ ಮತ್ತು ಪುತ್ತೂರು ನಿವಾಸಿ ವಿನಾಯಕ ಎಂದು ಗುರುತಿಸಲಾಗಿದೆ.

ಬಂಧಿತರು ಸುಳ್ಯ ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಆಟೋದಲ್ಲಿ ಅಕ್ರಮವಾಗಿ ಗಾಂಜಾ ವ್ಯವಹಾರ ನಡೆಸುತ್ತಿದ್ದರು ಎಂಬ ಮಾಹಿತಿ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಲ್ಲಿದ್ದ ಸುಮಾರು 1.394 ಕೆಜಿ ಯಷ್ಟು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಗಾಂಜಾ ಸಾಗಾಟಕ್ಕೆ ಬಳಸಿದ್ದ ಒಂದು ಆಟೋ ಹಾಗೂ ಒಂದು ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು 2,42,190 ಎಂದು ಅಂದಾಜಿಸಲಾಗಿದೆ.

Facebook Comments

comments