LATEST NEWS
ಸುಳ್ಯ – ಎರಡು ಕೆಎಸ್ಆರ್ ಟಿಸಿ ಬಸ್ ಗಳ ನಡುವೆ ಅಪಘಾತ – ಮಹಿಳೆ ಸಾವು

ಸುಳ್ಯ ಜೂನ್ 25: ಎರಡು ಕೆಎಸ್ ಆರ್ ಟಿಸಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ಆರಂತೋಡು ಗ್ರಾಮದ ಕೋಡಂಕೇರಿ ಎಂಬಲ್ಲಿ ನಡೆದಿದೆ.
ಮೃತರನ್ನು ಕುಶಾಲನಗರ ಮೂಲದ ಭಾರತಿ (50) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, 17 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಮತ್ತು ಮಡಿಕೇರಿ ಕಡೆಯಿಂದ – ಸುಳ್ಯ ಮಾರ್ಗವಾಗಿ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸುಳ್ಯ ವೃತ್ತ ನಿರೀಕ್ಷಕರು ಹಾಗೂ ಉಪನಿರೀಕ್ಷಕರು ಭೇಟಿ ನೀಡಿದ್ದು, ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು. ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.