DAKSHINA KANNADA
ಕಡಬ ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆಯಲ್ಲಿ ಕುಸಿದು ಬಿದ್ದ ಸುಳ್ಯ ಶಾಸಕ ಅಂಗಾರ

ಕಡಬ ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆಯಲ್ಲಿ ಕುಸಿದು ಬಿದ್ದ ಸುಳ್ಯ ಶಾಸಕ ಅಂಗಾರ
ಕಡಬ ಮಾರ್ಚ್ 27: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಪಡಿತರ ವ್ಯವಸ್ಥೆಯ ನಿರ್ವಹಣೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಸುಳ್ಯ ಶಾಸಕ ಎಸ್.ಅಂಗಾರ ಅಸ್ವಸ್ಥಗೊಂಡ ಘಟನೆ ಕಡಬದಲ್ಲಿ ನಡೆದಿದೆ.
ಕಡಬದಲ್ಲಿ ನಡೆದ ಅಧಿಕಾರಿಗಳು, ವರ್ತಕರು ಹಾಗೂ ಜನಪ್ರತಿನಿಧಿಗಳ ಸಭೆಯ ಬಳಿಕ ಕಡಬದ ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ದಿಢೀರ್ ರಕ್ತದೊತ್ತಡ ಕಡಿಮೆಯಾಗಿದೆ. ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ರವಾನಿಸಲಾಯಿತು.
