Connect with us

  DAKSHINA KANNADA

  Sullia – ಜಾಗದ ತಕರಾರು ಅಣ್ಣನ ಕೊಲೆಗೈದ ತಮ್ಮಂದಿರು…!!

  ಸುಳ್ಯ ಜುಲೈ 14: ಜಾಗದ ತಕರಾರಿಗೆ ಸಂಬಂಧಿಸಿದಂತೆ ತಮ್ಮಂದಿರು ಸೇರಿ ಅಣ್ಣನನ್ನು ಇರಿದು ಕೊಲೆಗೈದ ಘಟನೆ ಸುಳ್ಯ ಸಂಪಾಜೆಯ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಕುದ್ರೆಪಾಯ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ.


  ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವಿತ್ತು. ಶುಕ್ರವಾರ ಇವರು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದರು. ಈ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದಿದೆ. ತೀವ್ರ ಚರ್ಚೆ ನಡೆದು ಕೋಪದ ತೀವ್ರತೆಯಲ್ಲಿ ಸಹೋದರರು ಸೇರಿ ಚೂರಿಯಿಂದ ಇರಿದು ಉಸ್ಮಾನ್ ನನ್ನು ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ. ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply