Connect with us

  DAKSHINA KANNADA

  ಸುಳ್ಯ ಪದವು: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

  ಸುಳ್ಯಪದವು, ಜೂನ್ 05: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ.

  ತನ್ನ ಮನೆಯ ಸಮೀಪ ಇರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡಲಾಗಿತ್ತು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದು ಗಂಭೀರ ಗಾಯಗೊಂಡಿದ ಗೋಪಾಲ ಕೃಷ್ಣ ರವರನ್ನು ವಾಹನದಲ್ಲಿ ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ.

  ಪಡುವನೂರು ಗ್ರಾಮದ ಸುಳ್ಳಪದವು ವಲಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಸುಳ್ಯ ಪದವು ಯುವ ಶಕ್ತಿ ಕಲಾ ಮತ್ತು ಕ್ರೀಡಾ ಬಳಗದ ಗೌರವಾಧ್ಯಕ್ಷರಾಗಿ, ಸುಳ್ಯ ಪದವು ಅಯ್ಯಪ್ಪ ಭಜನಾ ಮಂದಿರದ ಬ್ರಹ್ಮ ಕಳಶ ಸಮಿತಿಯ ಸ್ವಾಗತ ಸಮಿತಿಯ ಸಂಚಾಲಕರಾಗಿ, ಶ್ರೀಶೈಲಂ ಶಾಮಿಯಾನನ ಮಾಲಕರಾಗಿ, ಉತ್ತಮ ಕೃಷಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು. ತಾಯಿ ಪತ್ನಿ ಮೂವರು ಮಕ್ಕಳನ್ನು ಅಗಲಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply