ಸುಳ್ಯ ಫೆಬ್ರವರಿ 20: ತೋಟದ ಕೆಲಸಕ್ಕೆಂದು ಬಂದಿದ್ದ ಅಪ್ರಾಪ್ತ ಯುವತಿಯೋರ್ವಳು ಗರ್ಭಿಣಿಯಾಗಿದ್ದು, ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.


ಝಾರ್ಖಂಡ್ ಮೂಲದ ಯುವಕ ಹಾಗೂ ಯುವತಿ ಐವರ್ನಾಡಿನ ಮನೆಯೊಂದಕ್ಕೆ ತೋಟದ ಕೆಲಸಕ್ಕೆ ಬಂದಿದ್ದರು. ಇತ್ತೀಚೆಗೆ ಯುವತಿಗೆ ಜ್ವರ ಬಂದ ಕಾರಣ ಆಕೆ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಯುವತಿ ಗರ್ಭವತಿಯೆಂದು ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಯುವತಿ ಅಪ್ರಾಪ್ತ ವಯಸ್ಕಳಾದ ಕಾರಣ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ

Share Information