DAKSHINA KANNADA
ಸುಳ್ಯ: ಮಳೆಯಲ್ಲಿ ಕೊಚ್ಚಿ ಹೋದ ಮರದ ಸೇತುವೆ – ಸಂಪರ್ಕ ಕಡಿತ

ಸುಳ್ಯ, ಜುಲೈ 10: ಮರದ ಸೇತುವೆ ಮಳೆಯಲ್ಲಿ ಕೊಚ್ಚಿ ಹೋಗಿದ್ದು ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಂಪರ್ಕ ಕಡಿತಗೊಂಡು ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವ ಘಟನೆ ಸುಳ್ಯ ಬಾಳುಗೋಡು ಉಪ್ಪುಕಳದಲ್ಲಿ ನಡೆದಿದೆ.
ಈ ಘಟನೆಯಿಂದ ರೋಸಿ ಹೋಗಿರುವ ಇಲ್ಲಿಯ ಜನರು ಇದೀಗ ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ.
ಹಲವು ಸಮಸ್ಯೆಗಳು ಉಂಟಾಗಿದ್ದು, ಸ್ಥಳೀಯ ಜನಪ್ರತಿನಿಧಿ ಹಾಗು ವಿವಿಧ ಇಲಾಖಾ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸೇತುವೆ ನಿರ್ಮಾಣದ ಲಿಖಿತ ಭರವಸೆ ನೀಡದೇ ನಾವು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸ್ಥಳೀಯರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.