DAKSHINA KANNADA
ಸುಳ್ಯ – ಭೀಕರ ರಸ್ತೆ ಅಪಘಾತಕ್ಕೆ ಅಣ್ಣ ತಂಗಿ ಬಲಿ….!!

ಸುಳ್ಯ ಅಕ್ಟೋಬರ್ 04: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ.
ಮೃತರನ್ನು ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಮತ್ತು ಆತನ ಸಹೋದರಿ ಮೋಕ್ಷಾ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಎಲಿಮಲೆ ಮತ್ತು ಜಬಳೆ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಮಾರುತಿ ಕಾರು ಹಾಗೂ ಸ್ಕೂಟಿ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ನಿಶಾಂತ್ ಹಾಗೂ ಆತನ ಸಹೋದರಿ ಮೋಕ್ಷಾರನ್ನು ಸ್ಥಳೀಯರು ತಕ್ಷಣವೇ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆಗೆ ತಲುಪುವ ವೇಳೆ ನಿಶಾಂತ್ ಸಾವನ್ನಪ್ಪಿದ್ದರೆ, ಆತನ ತಂಗಿ ಮೋಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಆಕೆಯೂ ಸಾವನ್ನಪ್ಪಿದಳೆಂದು ತಿಳಿದು ಬಂದಿದೆ.

ಮೃತ ನಿಶಾಂತ್ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮೋಕ್ಷಾ ದೇವಚಳ್ಳ ಸ.ಮಾ.ಹಿ.ಪ್ರಾ. ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.