Connect with us

    DAKSHINA KANNADA

    ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚರ ಎಸಗಿದ ಆರೋಪಿ ಬಂಧನ..!

    ಸುಳ್ಯ, ಜುಲೈ 10: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.

    ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌  ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಆ ದೂರಿನಂತೆ ಪೊಲೀಸರು ಆರೋಪಿ ಮೇಲೆ  ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಜು. 7ರಂದು ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್‌ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್‌ ದೈಹಿಕ ಸಂಪರ್ಕ ಎಸಗಿರುವುದನ್ನು ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply